ಇಂದು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಅವರು 1 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರ ವಿರುದ್ಧ ಡಾ.ಸಿ.ಎನ್ ಮಂಜುನಾಥ್ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.