ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಈಶ್ವರ್ ಖಂಡ್ರೆ ಅವರ ಮಗ ಸಾಗರ್ ಖಂಡ್ರೆ ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ನಾಯಕ, ಕೇಂದ್ರ ಸಚಿವ ಭಗವಂತ ಖೂಬಾ ಸೋಲುಂಡಿದ್ದಾರೆ. ಆ ಮೂಲಕ ದೇಶದ ಕಿರಿಯ ಸಂಸದ ಎಂಬ ಹೆಗ್ಗಳಿಗೂ ಪಾತ್ರರಾಗಿದ್ದಾರೆ. 26ನೇ ವಯಸ್ಸಿಗೆ ಸಾಗರ್ ಖಂಡ್ರೆ ಸಂಸತ್ ಪ್ರವೇಶಿಸಿದ್ದಾರೆ.
ಬಿಜೆಪಿ ಭದ್ರಕೋಟೆಯಾದ ಬೀದರ್ ಅನ್ನು ಲೋಕಸಭಾ ಚುನಾವಣೆಯ ಮೂಲಕ ಖಂಡ್ರೆ ಮಗ ಛಿದ್ರಗೊಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ 665162 ಮತಗಳಿಂದ ಗೆಲುವಿನ ನಗೆ ಬೀರಿದ್ದಾರೆ. ಇನ್ನು ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಭಗವಂತ ಖೂಬಾ 129396 ಮತಗಳಿಂದ ಸೋಲುಂಡಿದ್ದಾರೆ.