- ಉತ್ತರಾಖಂಡದಲ್ಲಿ ಸಿಲುಕಿ ಬದುಕುಳಿದವರು ಬೆಂಗಳೂರಿಗೆ ವಾಪಸ್
- ಮೃತಪಟ್ಟ 9 ಜನರ ಮೃತದೇಹಗಳು ವಾಪಸ್
ಉತ್ತರಾಖಂಡ ಹಿಮಪಾತದಲ್ಲಿ ಸಿಲುಕಿ ಬದುಕುಳಿದ ಚಾರಣಿಗರು ಇಂದು ರಾತ್ರಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ.
ಮೃತ 9 ಜನ ಚಾರಣಿಗರ ದೇಹಗಳನ್ನು ಎಂಬಾಮಿಂಗ್ಗಾಗಿ ವಿಮಾನ ನಿಲ್ದಾಣದಿಂದ ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ. ಎಂಬಾಮಿಂಗ್ ನಂತರ ಮೃತದೇಹಗಳನ್ನು ಆಂಬ್ಯುಲೆನ್ಸ್ಗಳ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ಸಾಗಿಸಲಾಗುತ್ತದೆ. ನಾಳೆ ಬೆಳಿಗ್ಗೆ ದೆಹಲಿ-ಬೆಂಗಳೂರು ವಿಮಾನಗಳಲ್ಲಿ ಮೃತ ದೇಹಗಳನ್ನು ರವಾನಿಸಲು ಸ್ಥಳವನ್ನು ಕಾಯ್ದಿರಿಸಿದ್ದೇವೆ. ಇಂದು ಸಂಜೆ 5.50 ರ ವಿಮಾನದಲ್ಲಿ ಬದುಕುಳಿದ ಎಲ್ಲಾ 13 ಜನ ಚಾರಣಿಗರು ಬೆಂಗಳೂರಿಗೆ ಹಿಂತಿರುಗಲು ಟಿಕೆಟ್ ಕಾಯ್ದಿರಿಸಲಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ತಮ್ಮ ಫೇಸ್ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.