- ಮುಸ್ಲಿಮರ ಪವಿತ್ರ ಹಜ್ ಯಾತ್ರೆ ಇದೇ ಜೂನ್ 14 ರಿಂದ ಪ್ರಾರಂಭ
- ಮೆಕ್ಕಾ ಮುಸ್ಲಿಮರ ಪವಿತ್ರ ಯಾತ್ರಾ ಸ್ಥಳ
ಮುಸ್ಲಿಮರ ಪವಿತ್ರ ಹಜ್ ಯಾತ್ರೆ ಇದೇ ಜೂನ್ 14 ರಿಂದ ಪ್ರಾರಂಭವಾಗಲಿದೆ ಎಂದು ಸೌದಿ ಅರೇಬಿಯಾ ಘೋಷಣೆ ಮಾಡಿದೆ. ಮೆಕ್ಕಾ ಮುಸ್ಲಿಮರ ಪವಿತ್ರ ಯಾತ್ರಾ ಸ್ಥಳವಾಗಿದೆ.
ಅರೇಬಿಯಾದ ಮೆಕ್ಕಾಗೆ ಹಜ್ ಯಾತ್ರೆ ಭಾಗವಾಗಿ ಸುಮಾರು 20 ಲಕ್ಷಕ್ಕೂ ಹೆಚ್ಚು ಮುಸ್ಲಿಮರು ವರ್ಷ ವರ್ಷ ಭೇಟಿ ನೀಡುತ್ತಾರೆ. ವಿಶ್ವದ ಅತಿದೊಡ್ಡ ಧಾರ್ಮಿಕ ಕ್ಷೇತ್ರಗಳಲ್ಲಿ ಮೆಕ್ಕಾವೂ ಒಂದಾಗಿದೆ. ಎಲ್ಲ ಮುಸ್ಲಿಮರು ಜೀವನದಲ್ಲಿ ಒಮ್ಮೆಯಾದರೂ ಮೆಕ್ಕಾ ಯಾತ್ರೆ ಕೈಗೊಳ್ಳಬೇಕು ಎಂಬ ಮಹದಾಸೆ ಹೊಂದಿರುತ್ತಾರೆ.
ಜೂನ್ 14 ರಂದು ಹಜ್ ಯಾತ್ರೆ ಪ್ರಾರಂಭವಾಗುತ್ತಿದ್ದು, ನಂತರ ಕ್ರಮವಾಗಿ ಜೂನ್ 15 ಮತ್ತು ಜೂನ್ 16 ರಂದು ಅರಾಫತ್ ದಿನ ಮತ್ತು ಈದ್ ಅಲ್ ಅಧಾ ಆಚರಣೆಗಳು ನಡೆಯಲಿವೆ. ಯಾತ್ರಾರ್ಥಿಗಳಿಗೆ ಇದು ಅಧ್ಯಾತ್ಮಿಕ ಅನುಭವವಾಗಿದೆ. ಇಲ್ಲಿಗೆ ಭೇಟಿ ನೀಡಿದರೆ ಪಾಪಗಳು ಕಳೆದು ಹೋಗಲಿವೆ ಎಂಬ ನಂಬಿಕೆಯನ್ನು ಹೊಂದಿದ್ದಾರೆ.