- ಸಿಲಿಕಾನ್ ಸಿಟಿಯ ಹಲವೆಡೆ ಮಧ್ಯಾಹ್ನವೇ ಮಳೆ ಆರಂಭ
- ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಟ
ಸಿಲಿಕಾನ್ ಸಿಟಿಯ ಹಲವೆಡೆ ವರುಣನ ಆಗಮನವಾಗಿದೆ. ಮಲ್ಲೇಶ್ವರಂ, ಯಶವಂತಪುರ, ಜಾಲಹಳ್ಳಿ, ರಾಜಾಜಿನಗರ, ಶಾಂತಿನಗರ, ಇನ್ ಪೆಂಟ್ರಿ ರಸ್ತೆ, ವಿಲ್ಸನ್ ಗಾರ್ಡ್ನ್ , ಬಸವನಗುಡಿ, ಲಾಲ್ ಬಾಗ್, ವಿಜಯನಗರ ಸೇರಿದಂತೆ ಮಳೆ ಶುರುವಾಗಿದೆ. ಇಷ್ಟು ದಿನ ಸಂಜೆಯಾಗುತ್ತಿದ್ದಂತೆ ಶುರುವಾಗುತ್ತಿದ್ದ ಮಳೆ, ಇಂದು ಮಟ ಮಟ ಮಧ್ಯಾಹ್ನವೇ ಮಳೆಯಾಗಿದೆ. ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ.
ನಗರದಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿತ್ತು. ಜೊತೆಗೆ ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.