- ದರ್ಶನ್ & ಗ್ಯಾಂಗ್ ಇದೇ ಜೂನ್ 20ರವರೆಗೆ ಪೊಲೀಸ್ ಕಸ್ಟಡಿಗೆ
- ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಆರೋಪಿಗಳು ಪೊಲೀಸ್ ಕಸ್ಟಡಿಗೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್, ಪವಿತ್ರಗೌಡ ಹಾಗೂ ಅವರ ಗ್ಯಾಂಗ್ ಅನ್ನು ಇಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮುಂದೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಯ ವಿಸ್ತರಣೆಗೆ ಮನವಿ ಮಾಡಲಾಯಿತು. ಪೊಲೀಸರ ಮನವಿ ಪುರಸ್ಕರಿಸಿದ ನ್ಯಾಯಾಲಯ ಪೊಲೀಸ್ ಕಸ್ಟಡಿಯನ್ನು ಐದು ದಿನಗಳ ಕಾಲ ಮುಂದುವರೆಸಲಾಗಿದೆ. ದರ್ಶನ್, ಪವಿತ್ರಾಗೌಡ ಹಾಗೂ ಇತರೆ ಆರೋಪಿಗಳನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು. ಆರೋಪಿಗಳನ್ನು ಐದು ದಿನಗಳ ಕಾಲ ಪೊಲೀಸರ ಕಸ್ಟಡಿಗೆ ನೀಡಲಾಗಿತ್ತು. ಇದೀಗ ದರ್ಶನ್ ಹಾಗೂ ಆರೋಪಿಗಳು ಐದು ದಿನವನ್ನು ಕಸ್ಟಡಿಯಲ್ಲಿ ಕಳೆದಿದ್ದು, ನಾಳೆ ಭಾನುವಾರ ಆಗಿರುವ ಕಾರಣ ಒಂದು ದಿನ ಮುಂಚಿತವಾಗಿ ಅಂದರೆ ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ದರ್ಶನ್ & ಗ್ಯಾಂಗ್ ಇದೇ ಜೂನ್ 20ರವರೆಗೆ ಪೊಲೀಸ್ ಕಸ್ಟಡಿಯಲ್ಲಿ ಇರಬೇಕಾಗಿದೆ.
ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿಯನ್ನು ಮುಂದುವರೆಸಲಾಗಿದೆ. ಈ ಪ್ರಕರಣದಲ್ಲಿ ಒಟ್ಟು 19 ಆರೋಪಿಗಳಿದ್ದಾರೆ. ಪ್ರಮುಖ ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿಯನ್ನಷ್ಟೆ ಮುಂದುವರೆಸಲಾಗಿದೆ. ದರ್ಶನ್, ದರ್ಶನ್, ಪವಿತ್ರಾ, ದೀಪಕ್, ಪವನ್, ರಘು, ಅನು ಕುಮಾರ್, ನಂದೀಶ್, ಜಗದೀಶ್, ವಿನಯ್, ನಾಗರಾಜ್, ಲಕ್ಷ್ಮಣ, ಪ್ರದೋಶ್, ಕೇಶವ್,