- ದರ್ಶನ್ಗಾದ ಪರಿಸ್ಥಿತಿ ನೆನೆದು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ
- ರಾಮನಗರದ ಚನ್ನಪಟ್ಟಣ ತಾಲೂಕಿನ ಮಾಳೆ ದೊಡ್ಡಿಯಲ್ಲಿ ಘಟನೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ನಟ ದರ್ಶನ್ ಅರೆಸ್ಟ್ ಹಿನ್ನೆಲೆ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅನೇಕರು ಪೊಲೀಸ್ ಠಾಣೆಯ ಎದುರು ಜಮಾಯಿಸಿ ದರ್ಶನ್ ಪರ ಘೋಷಣೆ ಕೂಗುತ್ತಿದ್ದಾರೆ. ಈಗ ದರ್ಶನ್ಗಾಗಿ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡರೇ ಎನ್ನುವ ಪ್ರಶ್ನೆ ಮೂಡಿದೆ. ಚನ್ನಪಟ್ಟಣದಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಭೈರೇಶ್ ಹೆಸರಿನ ದರ್ಶನ್ ಅಭಿಮಾನಿ ಮೋರಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮಾಳೆ ದೊಡ್ಡಿಯಲ್ಲಿ ಘಟನೆ ನಡೆದಿದೆ. ತಮ್ಮ ಹೀರೋಗೆ ಈ ಸ್ಥಿತಿ ಬರಬಾರದಿತ್ತೆಂದು ಆತ್ಮಹತ್ಯೆ ಶಂಕೆ ಮಾಡಿಕೊಂಡಿರೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ದರ್ಶನ್ಗಾದ ಪರಿಸ್ಥಿತಿ ನೆನೆದು ಸಾಕಷ್ಟು ಮರುಗಿದ್ದರು. ನಿತ್ರಾಣಗೊಂಡು ಮೋರಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಭರ್ಜರಿ ಚರ್ಚೆ ನಡೆಯುತ್ತಿದೆ. ನಿಜವಾಗಲೂ ನೋವಿನಲ್ಲೇ ಆತ ಮೃತಪಟ್ಟಿದ್ದೇ ಎನ್ನುವ ಪ್ರಶ್ನೆ ಮೂಡಿದೆ.