- ಗಂಡು ಮಗುವಿಗೆ ಜನ್ಮ ನೀಡಿದ ನಟಿ ಅಮಲಾ ಪೌಲ್
- ಇನ್ಸ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಫೋಟೋ ಶೇರ್ ಮಾಡಿದ ನಟಿ
ಕನ್ನಡದ ‘ಹೆಬ್ಬುಲಿ’ ನಟಿ ಅಮಲಾ ಪೌಲ್ ಅವರು ಕೆಲ ತಿಂಗಳ ಹಿಂದೆ ಅಭಿಮಾನಿಗಳಿಗೆ ಗುಡ್ನ್ಯೂಸ್ ಕೊಟ್ಟಿದ್ದರು. ‘ಇಬ್ಬರು ಮೂವರಾಗುತ್ತಿದ್ದೇವೆ’ ಎಂದು ಹೇಳುವ ಮೂಲಕ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದರು.
ಇದೀಗ ನಟಿ ಅಮಲಾ ಪೌಲ್ ಹಾಗೂ ಪತಿ ಜಗತ್ ದೇಸಾಯಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ನಟಿ ಅಮಲಾ ಪೌಲ್ ದಂಪತಿ ಮನೆಗೆ ಮುದ್ದಾದ ಗಂಡು ಮಗುವಿನ ಆಗಮನವಾಗಿದೆ. ಇನ್ನು, ಗಂಡು ಮಗುವಿಗೆ ಜನ್ಮ ನೀಡಿದ ಸುದ್ದಿಯನ್ನು ನಟಿ ಅಮಲಾ ಪೌಲ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ನಟಿ ಅಮಲಾ ಪೌಲ್ ತಮ್ಮ ಮುದ್ದಾದ ಮಗುವಿನೊಂದಿಗೆ ಮನೆಗೆ ಬರುತ್ತಿರುವುದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇನ್ನು ಶೇರ್ ಮಾಡಿಕೊಂಡ ವಿಡಿಯೋದಲ್ಲಿ ಪತಿ ಜಗತ್ ದೇಸಾಯಿ ಅವರು ನಟಿ ಅಮಲಾ ಮತ್ತು ಮಗುವಿಗೆ ಸರ್ಪ್ರೈಸ್ವೊಂದನ್ನು ನೀಡಿದ್ದಾರೆ. ಮೊದಲ ಮಗುವಿಗೆ ಜನ್ಮ ನೀಡಿದ ಖುಷಿಯಲ್ಲಿದ್ದ ಪತ್ನಿಗೆ ಮತ್ತೊಂದು ಸರ್ಪ್ರೈಸ್ ನೀಡಿದ್ದಾರೆ.
ವಿಶೇಷ ಥೀಮ್ನಲ್ಲಿ ಮಗುವಿನ ಮನೆಯನ್ನು ಅಲಂಕರಿಸಿದ್ದರು. ಇದನ್ನು ನೋಡಿದ ನಟಿ ಅಮಲಾ ಫುಲ್ ಶಾಕ್ ಆಗಿ ಖುಷಿ ಪಟ್ಟಿದ್ದಾರೆ. ಇನ್ನು ಇದೇ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಅಷ್ಟೇ ಅಲ್ಲದೆ ಅಮಲಾ ಪೌಲ್ ದಂಪತಿ ತಮ್ಮ ಮಗುವಿಗೆ ಹೆಸರನ್ನು ಸಹ ಇಟ್ಟಿದ್ದಾರೆ. ಆ ಹೆಸರನ್ನು ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿು ಶೀರ್ಷೆಕೆಯಾಗಿ ಹಾಕಿದ್ದಾರೆ. ILAI (ಇಳೈ ) ಎಂದು ಹೆಸರಿಟ್ಟಿದ್ದಾರೆ. ಅಭಿಮಾನಿಗಳಿಂದ ತಾಯಿ ಮಗುವಿಗೆ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.