- ಕೆಂಪೇಗೌಡ ಅವರ 515 ನೇ ಜಯಂತಿ ಆಚರಣೆಯ ಪೂರ್ವಭಾವಿ ಸಭೆ
- ವಿಧಾನಸೌಧದಲ್ಲಿ ನಾನಾ ಸಂಘಟನೆಗಳ ಮುಖಂಡರ ಜತೆ ಸಮಾಲೋಚನೆ
ಬೆಂಗಳೂರು: ಕೆಂಪೇಗೌಡ ಅವರ 515 ನೇ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ನಡೆಸಿದರು.
ಬೆಂಗಳೂರು ನಿರ್ಮಾತೃ ಕೆಂಪೇಗೌಡರ 515 ನೇ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿಂದು ನಾನಾ ಸಂಘಟನೆಗಳ ಮುಖಂಡರ ಜತೆ ಸಮಾಲೋಚನೆ ಬೆಂಗಳೂರು ನಗರಾಭಿವೃದ್ಧಿ ಸಚಿವ, ಡಿಸಿಎಂ ಡಿ ಕೆ ಶಿವಕುಮಾರ್ ನಡೆಸಿದರು. ಸಭೆಯಲ್ಲಿ ಸಚಿವರಾದ ಕೃಷ್ಣ ಬೈರೇಗೌಡ, ಕೆ ಎಚ್ ಮುನಿಯಪ್ಪ, ಶಾಸಕ ವಿಶ್ವನಾಥ್, ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ಪೂರ್ಣಿಮಾ, ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತೇಗೌಡ, ಮಾಜಿ ಅಧ್ಯಕ್ಷ ಕೆಂಚಪ್ಪಗೌಡ ಮತ್ತಿತರರಿದ್ದರು.