- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ
- ಕೆಲವೇ ಕ್ಷಣಗಳಲಿ ಕೋರ್ಟ್ಗೆ ಆರೋಪಿಗಳು ಹಾಜರು
- ನ್ಯಾಯಾಂಗ ಬಂಧನಕ್ಕೆ ಒಳಪಡಿಸೋ ಸಾಧ್ಯತೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಗೆಳತಿ ಪವಿತ್ರಾ ಗೌಡ ಸೇರಿ 17 ಆರೋಪಿಗಳ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಲಿದೆ. ಈಹಿನ್ನೆಲೆ ಕೆಲವೇ ಕ್ಷಣಗಳಲಿ ಕೋರ್ಟ್ಗೆ ಆರೋಪಿಗಳನ್ನ ಹಾಜರುಪಡಿಸಲಾಗುತ್ತೆ. ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಈ ಪ್ರಕರಣದ ಆರೋಪಿಗಳನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಲಾಗುತ್ತೆ. ನಂತರ ನ್ಯಾಯಾಂಗ ಬಂಧನಕ್ಕೆ ಒಳಪಡಿಸೋ ಸಾಧ್ಯತೆ ಇದೆ.