- ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ. ಯೋಗದಿನಾಚರಣೆ ನಿಮಿತ್ತ ವಿಧಾನಸೌಧದ ಮುಂಭಾಗ ಶುಕ್ರವಾರ ನಡೆದ ಯೋಗೋತ್ಸವದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೊಟ್, ಡಿಸಿಎಂ ಡಿ ಕೆ ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ದಿನೇಶ್ ಗುಂಡೂರಾವ್, ಎಂಎಲ್ಸಿ ಶರವಣ, ಕ್ರೀಡಾಪಟು ಅಶ್ವಿನಿ ನಾಚಪ್ಪ, ಕ್ರಿಕೆಟಿಗ ಮನೀಶ್ ಪಾಂಡೆ, ಚಿತ್ರನಟಿ ಅನು ಪ್ರಭಾಕರ್, ನಟ ಶರಣ್ ಮತ್ತಿತರರು ಭಾಗವಹಿಸಿದ್ದರು.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ, ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ತೋರಣಗಲ್ ಜಿಂದಾಲ್ನ ಬಸವೇಶ್ವರ ನಗರದ ಆವರಣದಲ್ಲಿ ಯೋಗ ದಿನ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತೋಷ್ ಲಾಡ್ ಫೌಂಡೇಷನ್ ಮತ್ತು ಶ್ವಾಸ ಯೋಗ ಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಸದ ಈ.ತುಕಾರಾಂ, ಸರ್ಕಾರದ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ನಟಿ ಶ್ರೀಲೀಲಾ, ವಚನಾನಂದ ಸ್ವಾಮೀಜಿ, ಶಾಸಕ ಶ್ರೀನಿವಾಸ್, KMF ಅಧ್ಯಕ್ಷ ಭೀಮಾನಾಯ್ಕ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.