- ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು
- ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪ
ಲಕ್ಕಿ ಅಲಿ ಅವರು ಭಾರತದ ಪ್ರಸಿದ್ಧ ಗಾಯಕರಲ್ಲಿ ಒಬ್ಬರಾಗಿದ್ದು, ಹಿಂದಿ, ತಮಿಳು ಸಿನಿಮಾಗಳಲ್ಲಿ ಹಲವು ಹಾಡುಗಳನ್ನು ಹಾಡಿದ್ದಾರೆ. ಲಕ್ಕಿ ಅಲಿ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಬೆಂಗಳೂರಿನ ನ್ಯೂ ಯಲಹಂಕ ಟೌನ್ ಬಳಿ ಇರುವ ಟ್ರಸ್ಟ್ ಒಂದಕ್ಕೆ ಸೇರಿರುವ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ನಟ ಲಕ್ಕಿ ಅಲಿ ಆರೋಪ ಮಾಡಿದ್ದಾರೆ. ಈ ಹಿನ್ನೆಲೆ ಕರ್ನಾಟಕ ಲೋಕಾಯುಕ್ತದಲ್ಲಿ ಲಕ್ಕಿ ಅಲಿ ಅವರು ದೂರು ದಾಖಲಿಸಿದ್ದಾರೆ. ಜೊತೆಗೆ ತಮ್ಮ ಟ್ವಿಟರ್ ಖಾತೆಯಲ್ಲಿ ದೂರಿನ ಪ್ರತಿಯನ್ನು ಸಹ ಶೇರ್ ಮಾಡಿದ್ದಾರೆ.
ಬಾಲಿವುಡ್ನ ಖ್ಯಾತ ಗಾಯಕ ಲಕ್ಕಿ ಅಲಿ ಅವರು ಈ ವಿಚಾರಕ್ಕೆ ಸಂಬಂಧಿಸಿದಂತೆ 2022ರಲ್ಲಿಯೂ ದೂರು ಸಲ್ಲಿಸಿದ್ದರು. ಈ ಕುರಿತಂತೆ ಸರಣಿ ಟ್ವೀಟ್ಗಳನ್ನು ಮಾಡಿದ್ದ ಅವರು, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಿಗೆ ಟ್ಯಾಗ್ ಮಾಡಿದ್ದಾರೆ. ನ್ಯೂ ಯಲಹಂಕ ಟೌನ್ ಬಳಿಯಿರುವ ತಮ್ಮ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಒತ್ತುವರಿಗೆ ರೋಹಿಣಿ ಸಿಂಧೂರಿಯವರು ಸಹಕಾರ ಕೊಟ್ಟಿದ್ದು ಆ ಮೂಲಕ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಈಗ ಮತ್ತೆ ತಮ್ಮ ಟ್ರಸ್ಟ್ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಜೊತೆಗೆ ಹಗರಣದಲ್ಲಿ ಯಲಹಂಕ ನ್ಯೂ ಟೌನ್ ಠಾಣೆಯ ಎಸಿಪಿ ಮಂಜುನಾಥ್, ತಾಲೂಕು ಸರ್ವೇ ಅಧಿಕಾರಿ ಮನೋಹನ್ ಶಾಮೀಲಾಗಿದ್ದಾರೆ. ರೋಹಿಣಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಗಾಯಕ ಲಕ್ಕಿ ಅಲಿ ಅವರು ಆರೋಪಿಸಿದ್ದಾರೆ.