- ಸೂರಜ್ ರೇವಣ್ಣ ವಿರುದ್ಧ ಆರೋಪ ಸಂಬಂಧ ಯಾವುದೇ ದೂರು ಬಂದಿಲ್ಲ
- ಪ್ರಕರಣದ ಬೆಳವಣಿಗೆ ನೋಡಿ ಸಿಐಡಿಗೆ ವಹಿಸುವ ಕೆಲಸ ಮಾಡುತ್ತೇವೆ
ಸೂರಜ್ ರೇವಣ್ಣ ವಿರುದ್ಧ ಆರೋಪ ಸಂಬಂಧ ಇನ್ನು ಯಾವುದೇ ದೂರು ಬಂದಿಲ್ಲ. ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಕರಣದ ಬೆಳವಣಿಗೆ ನೋಡಿ ಸಿಐಡಿಗೆ ವಹಿಸುವ ಕೆಲಸ ಮಾಡುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಸದಾಶಿವನಗರದಲ್ಲಿ ಮಾತನಾಡಿದ ಜಿ. ಪರಮೇಶ್ವರ್ ಅವರು ಸೂರಜ್ ರೇವಣ್ಣ ವಿರುದ್ಧ ಆರೋಪ ಇನ್ನೂ ಯಾವುದೇ ದೂರು ಬಂದಿಲ್ಲ. ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ನನಗೆ ಯಾವುದೇ ಪತ್ರ ಬಂದಿಲ್ಲ. ದೂರು ಕೂಡ ಬಂದಿಲ್ಲ. ಸೂರಜ್ ರೇವಣ್ಣ ಆಗಲಿ, ಆ ದೂರುದಾರ ಆಗಲಿ ಎಲ್ಲಿಯೂ ದೂರು ಕೊಟ್ಟಿಲ್ಲ. ಯಾವುದೇ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿಲ್ಲ. ಸೂರಜ್ ರೇವಣ್ಣ ಪರ ಶಿವಕುಮಾರ್ ಎಂಬುವವರು ದೂರು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.