- ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬಿ.ವೈ ವಿಜಯೇಂದ್ರ
ದೆಹಲಿ: ನರೇಂದ್ರ ಮೋದಿ ಸಂಪುಟದ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ನವದೆಹಲಿಯ ಅವರ ಕಚೇರಿಯಲ್ಲಿಂದು ಅಮಿತ್ ಶಾ ಭೇಟಿ ಮಾಡಿದ ವಿಜಯೇಂದ್ರ, ದೇಶದ ಸುಭದ್ರತೆಗಾಗಿ ದಿಟ್ಟ ಹೆಜ್ಜೆಗಳನ್ನಿಟ್ಟು ಇತಿಹಾಸ ನಿರ್ಮಿಸಿ ಮೋದಿ ಜೀ ಅವರ ಸಂಪುಟಕ್ಕೆ ಮತ್ತೆ ಸೇರ್ಪಡೆಗೊಂಡ ಮಾನ್ಯ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಆತ್ಮೀಯವಾಗಿ ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ಕಳೆದ ಲೋಕಸಭಾ ಚುನಾವಣೆಯ ಕರ್ನಾಟಕದ ಫಲಿತಾಂಶದ ಕುರಿತು ತೃಪ್ತಿ ವ್ಯಕ್ತಪಡಿಸಿದ ಅವರು ರಾಜ್ಯದ ಜನತೆಗೆ ಕೃತಜ್ಞತಾ ಪೂರ್ವಕ ಅಭಿನಂದನೆ ಸಲ್ಲಿಸಿದರು. ರಾಜ್ಯದಲ್ಲಿ ಜನವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ರೂಪಿಸಿರುವ ಬಿಜೆಪಿ ಕರ್ನಾಟಕದ ಕುರಿತು ವಿವರ ನೀಡಲಾಯಿತಲ್ಲದೇ, ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಅವರಿಂದ ಮಾರ್ಗದರ್ಶನ ಕೋರಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.