- ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಸಿಎಂ ಸಿದ್ದು, ಪರಮೇಶ್ವರ
- ಸಿಎಂ ಸಿದ್ದರಾಮಯ್ಯರಿಗೆ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ಸಾಥ್
ದೆಹಲಿಯಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿ ಪರಮೇಶ್ವರ್ ಅವರು ಭೇಟಿ ಮಾಡಿದರು. ಸಿಎಂ ಸಿದ್ದರಾಮಯ್ಯರಿಗೆ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ಸಾಥ್ ನೀಡಿದ್ರು. ರಾಜ್ಯದ ಪೊಲೀಸ್ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು. ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.