- ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
- ಕಾಂಗ್ರೆಸ್ ಸರ್ಕಾರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ
ಹಾಲಿನ ದರ ಏರಿಕೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ ಆಯೋಜನೆ ಮಾಡಲಾಗಿದ್ದು, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.
ಬಿಜೆಪಿ ಕಾರ್ಯಕರ್ತರು ಹಸು ಹಿಡಿದು ಪ್ರತಿಭಟನೆ ನಡೆಸಲಾಗಿದ್ದು, ಪ್ರೀಡಂ ಪಾರ್ಕ್ ನಲ್ಲಿ ಚಹಾ, ಕಾಫಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ರು. ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕರಾದ ಎನ್. ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಬಿಜೆಪಿ ಮುಖಂಡರು ಭಾಗಿಯಾಗಿದ್ದರು.