ಸ್ಟೂಡೆಂಟ್ ವೀಸಾದಲ್ಲಿ ಭಾರತಕ್ಕೆ ಬಂದು ಮೋಜು-ಮಸ್ತಿಗಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.
ಗೋವಾ, ಮುಂಬೈ ಹಾಗೂ ದೆಹಲಿಯಲ್ಲಿ ವಾಸವಿರುವ ನೈಜೀರಿಯಾ, ಘಾನ ದೇಶದ ಪ್ರಜೆಗಳಿಂದ ಕಡಿಮೆ ಬೆಲೆಗೆ ಡ್ರಗ್ಸ್ ಖರೀದಿಸಿ ಮಾರಾಟ ಮಾಡುತಿದ್ದ ಇಬ್ಬರಿಂದ 12 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.