ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಬುಧವಾರ ಮತ್ತೆ ಏರು ಪೇರು ಕಾಣಿಸಿಕೊಂಡಿದೆ. ಲಾಲ್ ಕೃಷ್ಣ ಅಡ್ವಾಣಿ ಅವರನ್ನು ತಕ್ಷಣವೇ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದೇ ವೇಳೆ ಲಾಲ್ ಕೃಷ್ಣ ಅಡ್ವಾಣಿ ಅವರ ಕಚೇರಿ ನೀಡಿರುವ ಮಾಹಿತಿಯಲ್ಲಿ ನಿತ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ. ಈ ಹಿಂದೆ ಜೂನ್ 27 ರಂದು ಕೂಡ ಎಲ್ ಕೆ ಅಡ್ವಾಣಿ ಆರೋಗ್ಯ ಹದಗೆಟ್ಟ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಸುದ್ದಿ ಸಂಸ್ಥೆ ಎಎನ್ಐ ಪ್ರಕಾರ, ಡಾ.ವಿನೀತ್ ಪುರಿ ಅವರು ಅಪೋಲೋ ಆಸ್ಪತ್ರೆಯಲ್ಲಿ ಎಲ್ಕೆ ಅಡ್ವಾಣಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಬಿಜೆಪಿ ನಾಯಕನ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದರು.