ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಕುಂದಾಪುರ ಮತ್ತು ಬ್ರಹ್ಮಾವರ ವಲಯದ ಅಂಗನವಾಡಿ , ಪ್ರಾರ್ಥಮಿಕ, ಪ್ರೌಢ ಶಾಲೆ ಮತ್ತು ಪಿ ಯು ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ ಮಾಡಲಾಗಿದೆ. ಭಾರೀ ಮಳೆ ಸುರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಕುಂದಾಪುರದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಸಾರ್ವಜನಿಕರು ಮಳೆ ಹೆಚ್ಚಾಗಿರುವ ಕಾರಣ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತ ಸಲಹೆ ನೀಡಿದೆ. ನೆರೆ ಸಂಬಂಧಿತ ಜನರಿಗೆ ನೆರವಿಗೆ ಬರಲು ವ್ಯವಸ್ಥೆ ಮಾಡಿಕೊಂಡಿದೆ. ಶುಕ್ರವಾರ ಮಳೆ ಹೆಚ್ಚಾದ ಕಾರಣ ರಜೆ ಘೋಷಿಸಲಾಯಿತು.