ಚನ್ನಪಟ್ಟಣದಲ್ಲಿ ನಾನೇ ಅಭ್ಯರ್ಥಿ ಎಂದ ಸಿ.ಪಿ.ಯೋಗೇಶ್ವರ್ ಹೇಳಿಕೆ ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಆದರೆ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ನಾನೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳೋಕೆ ಆಗಲ್ಲ, ನನ್ನ ಕಾರ್ಯಕರ್ತರ ಅಭಿಪ್ರಾಯ ಕೇಳಬೇಕು.
ಬಿಜೆಪಿ ಹೈಕಮಾಂಡ್ ಅಥವಾ ರಾಜ್ಯದ ನಾಯಕರು ನನ್ನ ಜೊತೆ ಈ ಬಗ್ಗೆ ಚರ್ಚೆ ಮಾಡಿಲ್ಲ. ನಾನು ಯೋಗೇಶ್ವರ್ ಅವರಿಗೂ ನಮ್ಮ ಕಾರ್ಯಕರ್ತರನ್ನು ಭೇಟಿ ಮಾಡಿ ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಹೇಳಿದ್ದೀನಿ. ಈಗಾಗಲೇ ನಿಖಿಲ್ ಹೆಸರು, ಅನುಸೂಯ ಹೆಸರು ಕೇಳಿ ಬಂದಿದೆ. ನಮ್ಮ ಚನ್ನಪಟ್ಟಣದ ಕಾರ್ಯಕರ್ತರ ಅಭಿಪ್ರಾಯ ತಿಳಿದುಕೊಂಡೇ ನಿರ್ಧಾರ ಮಾಡುತ್ತೇವೆ ಎಂದು ಹೆಚ್ಡಿಕೆ ಹೇಳಿದ್ದಾರೆ.