ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಸೇನೆಯ ಯೋಧ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಮೊಡೆರ್ಗಾಮ್ ಗ್ರಾಮದಲ್ಲಿ ಭದ್ರತಾ ಸಿಬ್ಬಂದಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಇದ್ದಕ್ಕಿದ್ದಂತೆ ಭಯೋತ್ಪಾದಕರು ಅವರ ಮೇಲೆ ಗುಂಡು ಹಾರಿಸಿದರು ಎಂದು ಅವರು ಹೇಳಿದರು. ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಸೇನೆಯ ಯೋಧ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಾಚರಣೆ ಮುಂದುವರೆದಿದೆ ಮತ್ತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅವರು ಹೇಳಿದರು.