ರಾಜ್ಯದಲ್ಲಿ ಡೆಂಗ್ಯೂ ಸೋಂಕಿನ ಅಬ್ಬರ ಜೋರಾಗಿದೆ. ಶನಿವಾರ ಒಂದೇ ದಿನ 175 ಜನರಿಗೆ ಡೆಂಗ್ಯೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಡೆಂಗ್ಯೂ ಸೋಂಕಿತ 352 ಜನರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 127 ಸೋಂಕಿತರು ಬಿಬಿಎಂಪಿ ವ್ಯಾಪ್ತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ರಾಜ್ಯದಲ್ಲಿ ಇದುವರೆಗೆ 7 ಸಾವಿರ ಜನರಿಗೆ ಡೆಂಗ್ಯೂ ಸೋಂಕು ತಗುಲಿದೆ.
ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಮುಂದುವರಿದಿದೆ. 7 ಸಾವಿರಕ್ಕೂ ಅಧಿಕ ಕೇಸ್ಗಳು ಪತ್ತೆಯಾಗಿವೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 175 ಜನರಲ್ಲಿ ಡೆಂಗ್ಯೂ ಕೇಸ್ ವರದಿಯಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ 1908 ಹೊಸ ಪ್ರಕರಣ ಧೃಡಪಟ್ಟಿದೆ. ಡೆಂಗ್ಯೂನಿಂದ ಅಂಜನಾಪುರದ 11 ವರ್ಷದ ಬಾಲಕ ಗಗನ್ ಸಾವನ್ನಪ್ಪಿದ್ದಾನೆ. ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಗಗನ್ ಚಿಕಿತ್ಸೆ ಫಲಿಸದೇ ಶುಕ್ರವಾರ ತಡರಾತ್ರಿ ಮೃತಪಟ್ಟಿದ್ದಾನೆ.