ಬಿಎ ಮತ್ತು ಬಿಎಸ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗೈಡ್ ಹಾಗೂ ಪುಸ್ತಕಗಳನ್ನಿಟ್ಟುಕೊಂಡು ಸಾಮೂಹಿಕ ನಕಲು ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇದಕ್ಕೆ ಅಧ್ಯಾಪಕರು ನೆರವಾಗುತ್ತಿರುವುದು ಸಿಸಿಟಿವಿ ದೃಶ್ಯದಲ್ಲಿ ಕಂಡುಬಂದಿದೆ. ಎಸ್ಡಿಎಂ ವಿಜಯ್ ಸಿಂಗ್ ತನಿಖೆಗಾಗಿ ಸ್ಥಳಕ್ಕೆ ಬಂದಾಗ ಕೊಠಡಿಯಲ್ಲಿ ಎಲ್ಲವೂ ಸಾಮಾನ್ಯವಾಗಿತ್ತು. ಇದಾದ ಬಳಿಕ ವಿಡಿಯೋವೊಂದು ಹೊರಬಿದ್ದಿದ್ದು, ನಂತರ ಸಾಮೂಹಿಕ ನಕಲು ವಿಷಯ ಬೆಳಕಿಗೆ ಬಂದಿದೆ.
ಪರೀಕ್ಷಾ ಪ್ರಶ್ನೆ ಪತ್ರಿಕೆಗಳಲ್ಲಿನ ಅಕ್ರಮಗಳು ಮತ್ತು ಸೋರಿಕೆಗಳ ಬಗ್ಗೆ ದೇಶದಲ್ಲಿ ಈಗಾಗಲೇ ಹೋರಾಟಗಳು ನಡೆಯುತ್ತಿರುವ ಬೆನ್ನಲ್ಲೇ ಈ ಘಟನೆ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷೆ ನಡೆಯುವಾಗಲೇ ಹಲವು ವಿದ್ಯಾರ್ಥಿಗಳು ಗುಂಪು ಸೇರಿ ಬಹಿರಂಗವಾಗಿ ನಕಲು ಮಾಡುತ್ತಿದ್ದರು. ಕೊಠಡಿ ಮೇಲ್ವಿಚಾರಕರು ನಕಲು ನಿಲ್ಲಿಸುವ ಬದಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿರುವುದು ಕಂಡುಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಿಎ ಮತ್ತು ಬಿಎಸ್ಸಿ ಪರೀಕ್ಷೆಗಳು ನಡೆಯುತ್ತಿದ್ದು, ಈ ಪರೀಕ್ಷೆಗಳ ಕೇಂದ್ರವನ್ನು ದಾಮೋಹ್ ಪ್ರದೇಶದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಸಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳು ಅದೇ ಶಾಲೆಯ ತರಗತಿ ಕೊಠಡಿಯಲ್ಲಿದೆ ಎಂದು ಹೇಳಲಾಗಿದೆ