ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೆಎಂಎಂ ನಾಯಕ ಹೇಮಂತ್ ಸೊರೇನ್ಗೆ ಜಾಮೀನು ಮಂಜೂರು ಮಾಡಿರುವ ಜಾರ್ಖಂಡ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಜುಲೈ 4 ರಂದು ಜಾರ್ಖಂಡ್ನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸೊರೇನ್ಗೆ ಹೈಕೋರ್ಟ್ ಜೂನ್ 28 ರಂದು ಜಾಮೀನು ನೀಡಿತ್ತು. ಜಾರ್ಖಂಡ್ ಮುಕ್ತಿ ಮೋರ್ಚಾದ ಕಾರ್ಯನಿರ್ವಾಹಕ ಅಧ್ಯಕ್ಷರಾದ ಸೊರೇನ್, ಈ ಪ್ರಕರಣದಲ್ಲಿ ಇಡಿ ಇಂದ ಜನವರಿ 31 ರಂದು ಬಂಧಿಸುವ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.