ಬಾಲ್ಯವಿವಾಹ ಪ್ರಕರಣಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿರುವುದು ದುರದೃಷ್ಟಕರ ಸಂಗತಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಶನಿವಾರ ಮಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ ಎಂಬುದು ಜವಾಬ್ದಾರಿ ಸ್ಥಾನವಾದ ಮಹಿಳಾ ಮಂತ್ರಿಯಾಗಿ ಇದೊಂದು ತಲೆ ತಗ್ಗಿಸುವ ವಿಚಾರ ಎಂದು ಬೇಸರ ವ್ಯಕ್ತಪಡಿಸಿದರು.
ಬಾಲ್ಯವಿವಾಹದಲ್ಲಿ ಕರ್ನಾಟಕ 2ನೇ ಸ್ಥಾನ ಪಡೆದ ವಿಚಾರವಾಗಿ ಮಂಗಳೂರಿನಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ‘ಇದಕ್ಕೆ ನಮ್ಮ ಒಂದು ಇಲಾಖೆಯು ಮಾತ್ರ ಲೋಪದೋಷವೆಂದು ಹೇಳಲು ಸಾಧ್ಯವಿಲ್ಲ. ಸ್ಥಳೀಯ ಮಟ್ಟದಲ್ಲಿ ಎಲ್ಲರೂ ಒಗ್ಗಟಾಗಿ ಕೆಲಸ ಮಾಡಿದಾಗ ಈ ಬಾಲ್ಯ ವಿವಾಹ ತಡೆಗಟ್ಟಲು ಸಾಧ್ಯವಿದೆ ಎಂದು ಹೇಳಿದ್ದಾರೆ. ಮತ್ತು ಈ ಬಗ್ಗೆ ಅಧಿಕಾರಿಗಳಿಗೂ ಈಗಾಗಲೇ ನಿರ್ದೇಶನ ನೀಡಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.