ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಎ1 ಆರೋಪಿ ಪವಿತ್ರಾಗೌಡ ಆರೋಗ್ಯದಲ್ಲಿ ಏರುಪೇರಾಗಿದ್ದು, ಜೈಲಿನ ಆಸ್ಪತ್ರೆಯ ವಾರ್ಡ್ ನಲ್ಲೇ ಚಿಕಿತ್ಸೆ ನೀಡಲಾಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾಗೌಡ ಆರೋಗ್ಯದಲ್ಲಿ ಇಂದು ಏರುಪರೇರಾಗಿದೆ. ಹೀಗಾಗಿ ಜೈಲಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆ ಬಳಿಕ ಪವಿತ್ರಾಗೌಡ ಚೇತರಿಸಿಕೊಂಡಿದ್ದಾರೆ ಎನ್ನಲಾಗಿದೆ. ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂದ ಪವಿತ್ರಗೌಡ, ನಟ ದರ್ಶನ್ ಸೇರಿದಂತೆ ಹಲವು ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.