ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯನಿರ್ಣಯ ಮಂಡಳಿ ನಡೆಸಿದ್ದ 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ 03 ಫಲಿತಾಂಶವನ್ನು ನಾಳೆ ಪ್ರಕಟಿಸಲಿದೆ. ಜುಲೈ 16ರ ಮಧ್ಯಾಹ್ನ 3 ಗಂಟೆಗೆ ಅಧಿಕೃತ http//karresults.nic.in ವೆಬ್ ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷೆ ಐಎಎಸ್ ಅಧಿಕಾರಿ ಎನ್ ಮಂಜುಶ್ರೀ ತಿಳಿಸಿದ್ದಾರೆ.
ಜೂನ್ 24ರಿಂದ ಜುಲೈ 05ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-03 ನಡೆಸಲಾಗಿತ್ತು. ಕರ್ನಾಟಕದ ನಾನಾ ಜಿಲ್ಲೆ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಬಳಿಕ ಮೌಲ್ಯಮಾಪನವೂ ಮಾಡಲಾಗಿತ್ತು ಇದೀಗ ನಾಳೆ ಫಲಿತಾಂಶ ಪ್ರಕಟಿಸಲಾಗುತ್ತಿದೆ.