ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ಬಿಎಂಟಿಸಿ ಸಿಬ್ಬಂದಿಯೊಬ್ಬ ಶಾಂತಿನಗರ ಬಸ್ ನಿಲ್ದಾಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಸಂಜೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ಮಹೇಶ್(42) ಎಂಬಾತ ಇಡಿ ಕಚೇರಿಯ ಪಕ್ಕದಲ್ಲಿರುವ ಬಸ್ ನಿಲ್ದಾಣದ ಮೂರನೇ ಮಹಡಿಯ ಕಚೇರಿಯಲ್ಲಿ ಆತ್ಮಹತ್ಯೆ ಶರಣಾಗಿದ್ದಾನೆ. ನಿನ್ನೆ ಬೆಳಗ್ಗೆ ಮೃತ ಮಹೇಶ್, ರೆಕಾರ್ಡ್ ರೂಮ್ನ ಬೀಗ ಕೇಳಿದ್ದನಂತೆ. ಇದೀಗ ಕಚೇರಿಯಲ್ಲಿ ನೇಣುಬಿಗಿದುಕೊಂಡು ಮಹೇಶ್ ಕೊನೆಯುಸಿರೆಳೆದಿದ್ದಾನೆ. ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.