ಭ್ರಷ್ಟ ಅಧಿಕಾರಿಗೆ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ರಾಜ್ಯಾದ್ಯಂತ ಏಕಕಾಲದಲ್ಲಿ 54 ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಕೆಐಎಡಿಬಿ ಅಪರ ನಿರ್ದೇಶಕರಾದ ಸಿ.ಟಿ ಮುದ್ದುಕುಮಾರ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ 7 ಕಡೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ನಾಗರಭಾವಿಯ 2ನೇ ಹಂತದಲ್ಲಿರುವ ವಾಸದ ಮನೆ, ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಖನಿಜ ಭವನದಲ್ಲಿರುವ ಕಚೇರಿ, ತುಮಕೂರು ನಗರದ ಬನಶಂಕರಿಯಲ್ಲಿರುವ ಮನೆ, ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿರುವ ಮನೆ, ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿ ರಂಗನಾಥಪುರದಲ್ಲಿರುವ ಫಾರಂಹೌಸ್, ತುಮಕೂರಿನ ಅಂತರಸನಹಳ್ಳಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಪ್ಲಾಸ್ಟಿಕ್ ಬಾಟಲ್ ತಯಾರಿಕಾ ಫ್ಯಾಕ್ಟರಿ ಸೇರಿದಂತೆ ಒಟ್ಟು 7 ಕಡೆಗಳಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ತುಮಕೂರು ಲೋಕಾಯುಕ್ತ ಎಸ್.ಪಿ ಲಕ್ಷ್ಮೀ ಗಣೇಶ್ ಮಾರ್ಗದರ್ಶನದಲ್ಲಿ ದಾಳಿ ಮಾಡಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಬಿ.ಉಮಾಶಂಕರ್, ರಾಮಕೃಷ್ಣಯ್ಯ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಗಳಾದ ಸುರೇಶ್, ಶಿವರುದ್ರಪ್ಪ ಮೇಟಿ, ಮಹಮ್ಮದ್ ಸಲೀಂ, ಸೇರಿದಂತೆ ಒಟ್ಟು 30 ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಂದ ದಾಳಿ ನಡೆಸಿ ಪರಿಶೀಲನೇ ನಡೆಸುತ್ತಿದ್ದಾರೆ.