ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರವಾಸಿ ತಾಣ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಭಯಾನಕ ಭಯೋತ್ಪಾದಕರ ದಾಳಿ ನಡೆದಿದೆ. ಈ ದುರ್ಘಟನೆಯಲ್ಲಿ ಕನಿಷ್ಠ 25ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಅವರಲ್ಲಿ ಕೆಲವರು ವಿದೇಶಿ ಪ್ರವಾಸಿಗರು ಸೇರಿದ್ದಾರೆ ಎನ್ನಲಾಗಿದೆ. ಈ ದಾಳಿಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಗುಪ್ತಚರ ಇಲಾಖೆ ದೃಢಪಡಿಸಿದೆ.
ಪ್ರವಾಸಿಗರು ಬೈಸರನ್ ಕಣಿವೆಯ ಪ್ರದೇಶದಲ್ಲಿ ಸೈಟ್ಸೀಯಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಭಯೋತ್ಪಾದಕರು ಧಾಳಿ ನಡೆಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಭಯೋತ್ಪಾದಕರು ಮೊದಲು ಪ್ರವಾಸಿಗರ ಬಳಿ ಹೆಸರನ್ನು ಕೇಳಿದ ನಂತರ ಧರ್ಮವಿಚಾರಣೆ ನಡೆಸಿ, ಮುಸ್ಲಿಮರು ಅಲ್ಲ ಎನ್ನುವ ಅನುಮಾನದ ಆಧಾರ ಮೇಲೆ ನೇರವಾಗಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ
ಈ ದಾಳಿಯ ಹೊಣೆಗಾರಿಕೆಯನ್ನು ಲಷ್ಕರ್-ಎ-ತೊಯ್ಬಾದ ಶಾಖೆಯಾಗಿರುವ ಟಿಆರ್‌ಎಫ್ (The Resistance Front) ಎಂಬ ಸಂಘಟನೆ ಹೊತ್ತುಕೊಂಡಿದೆ. ಕಾಶ್ಮೀರದಲ್ಲಿ ಕಳೆದ 30 ವರ್ಷದಲ್ಲೇ ನಾಗರಿಕರ ಮೇಲೆ ಇಂಥ ದಾಳಿ ನಡೆದಿರಲಿಲ್ಲ.
ಮೃತರಲ್ಲಿ ಒಬ್ಬ ಇಸ್ರೇಲಿನ ಪ್ರವಾಸಿಗ ಹಾಗೂ ಒಬ್ಬ ಇಟಾಲಿಯನ ಪ್ರಜೆ ಇದ್ದಾರೆ. ಅವರು ಭಾರತದ ಸಾಂಸ್ಕೃತಿಕ ವೈವಿಧ್ಯತೆಯನ್ನು ಅನುಭವಿಸಲು ಕಾಶ್ಮೀರಕ್ಕೆ ಬಂದಿದ್ದರು. ಈ ದುರ್ಘಟನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ತೀವ್ರವಾಗಿ ಖಂಡಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಕೂಡಾ ಈ ವಿಷಯವಾಗಿ ಮಾಹಿತಿ ಪಡೆದುಕೊಂಡು, ಶೀಘ್ರ ಚಿಕಿತ್ಸೆ ಮತ್ತು ಸಂತ್ರಸ್ತರ ನೆರವಿಗೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಆದೇಶಿಸಿದ್ದಾರೆ.
ಘಟನೆಯ ನಂತರ ಪಹಲ್ಗಾಮ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಭದ್ರತಾ ಪಡೆಗಳನ್ನು ಹೆಚ್ಚಿಸಲಾಗಿದೆ. ಭಾರತೀಯ ಸೇನೆ, ಸಿಆರ್‌ಪಿಎಫ್ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆ ಸ್ಥಳವನ್ನು ಸಂಪೂರ್ಣವಾಗಿ ಆವರಿಸಿಕೊಂಡು ತನಿಖೆ ನಡೆಸುತ್ತಿದೆ. ಗಾಯಾಳುಗಳನ್ನು ಶ್ರೀನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವು ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ.