ಕಾರ್ಕಳದಲ್ಲಿ ಪರಶುರಾಮ್ ಥೀಮ್ ಪಾರ್ಕ್ ಹಗರಣ ಪ್ರಕರಣಕ್ಕೆ ಸಂಬಂಧಿಸಿ ನಕಲಿ ಪರಶುರಾಮನ ಮೂರ್ತಿ ಸ್ಥಾಪನೆಯಲ್ಲಿ ಮೊದಲ ತಲೆದಂಡ ಬಿದ್ದಿದೆ. ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ಕುಮಾರ್ ಅವರನ್ನು ಸಸ್ಪೆಂಡ್ ಮಾಡಿ ಡಿಸಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಕಾರ್ಕಳದ ಉಮ್ಮಿಕಲ್ ಬೆಟ್ಟದಲ್ಲಿ ನಿರ್ಮಿಸಲಾಗಿದ್ದ ಪರಶುರಾಮ್ ಥೀಮ್ ಪಾರ್ಕ್ನಲ್ಲಿ ನಕಲಿ ಪ್ರತಿಮೆಯನ್ನು ನಿರ್ಮಿಸಿದ್ದ ಎಂದು ಆರೋಪ ಕೇಳಿ ಬಂದಿತ್ತು. ನಿರ್ಮಾಣದ ಗುಣಮಟ್ಟದ ಜೊತೆಗೆ ಧಾರ್ಮಿಕ ಭಾವನೆಗೆ ಅಪಚಾರ ಪ್ರಕರಣದ ಬಗ್ಗೆ ಹೈಕೋರ್ಟ್ನಲ್ಲಿ ಪ್ರಕರಣ ದಾಖಲಾಗಿ ಸಿಐಡಿ ತನಿಖೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಅಡ್ಡಿ ಉಂಟು ಮಾಡುವ ಮತ್ತು ಹಸ್ತಕ್ಷೇಪ ಮಾಡುವ ಸಾಧ್ಯತೆ ಹಿನ್ನಲೆಯಲ್ಲಿ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅಮಾನತು ಮಾಡಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.