ನೀತಿ ಆಯೋಗದ 9 ನೇ ಆಡಳಿತ ಮಂಡಳಿ ಸಭೆಯು ಇಂದು ನಡೆಯಲಿದ್ದು, ಇದು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ವಿಕಸಿತ್ ಭಾರತ್ @ 2047 ದಾಖಲೆಯನ್ನು ಚರ್ಚಿಸುವ ಗುರಿಯನ್ನು ಹೊಂದಿದೆ. ನೀತಿ ಆಯೋಗ್ನ ಅತ್ಯುನ್ನತ ಸಂಸ್ಥೆಯಾದ ಕೌನ್ಸಿಲ್, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ಗಳು ಮತ್ತು ಹಲವಾರು ಕೇಂದ್ರ ಮಂತ್ರಿಗಳನ್ನು ಒಳಗೊಂಡಿದೆ, ಪ್ರಧಾನಿ ಮೋದಿ ಇದರ ಅಧ್ಯಕ್ಷರಾಗಿದ್ದಾರೆ.
ಹಲವಾರು ಮುಖ್ಯಮಂತ್ರಿಗಳು ಹಾಜರಾಗಲು ತಮ್ಮ ಒಪ್ಪಿಗೆಯನ್ನು ನೀಡಿದರೆ, ಬಿಜೆಪಿ ಅಧಿಕಾರದಲ್ಲಿ ಇಲ್ಲದೇ ಇರುವ ರಾಜ್ಯಗಳ ಸಿಎಂಗಳು ಕೇಂದ್ರ ಬಜೆಟ್ನಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗಿದೆ ಎಂದು ಹೇಳಿ ಸಭೆಯಿಂದ ದೂರ ಉಳಿಯಲಿದ್ದಾರೆ. ಇಂಡಿಯಾ ಬಣದಲ್ಲಿರುವ ರಾಜ್ಯದ ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಭಾಗವಹಿಸುತ್ತಿಲ್ಲ. ಆದರೆ ಬಂಗಾಳ ಸಿಎಂ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸಭೆಗೆ ಹಾಜರಾಗುವುದಾಗಿ ಹೇಳಿದ್ದಾರೆ.
ಸಭೆಯಲ್ಲಿ ಭಾಗವಹಿಸುತ್ತಿರುವ ಮುಖ್ಯಮಂತ್ರಿಗಳು:
- ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ
- ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಮತ್ತು ಅವರ ಉಪ ಮುಖ್ಯಮಂತ್ರಿ ಚೌನಾ ಮೇನ್
- ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ
- ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ
- ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ
- ಪುದುಚೇರಿ ಮುಖ್ಯಮಂತ್ರಿ ಎನ್ ರಂಗಸಾಮಿ
- ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
- ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್
- ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮ
- ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು
- ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್
- ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ
ಸಭೆ ಬಹಿಷ್ಕರಿಸಿದ ಮುಖ್ಯಮಂತ್ರಿಗಳು:
- ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ
- ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್
- ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ
- ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್
- ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್
- ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್
- ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ಸುಖು
ಈ ದೃಢೀಕೃತ ಹೆಸರುಗಳ ಹೊರತಾಗಿ, ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶ, ರಾಜಸ್ಥಾನ, ಉತ್ತರಾಖಂಡ್ಗಳ ಇತರ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. ಆದರೆ ನಿತೀಶ್ ಕುಮಾರ್ ಸಭೆಯಲ್ಲಿ ಭಾಗವಹಿಸುವ ಬಗ್ಗೆ ಯಾವುದೇ ದೃಢೀಕರಣ ಇದುವರೆಗೆ ಸಿಕ್ಕಿಲ್ಲ.