ಮಹಾರಾಷ್ಟ್ರದಲ್ಲಿ ಮಳೆಯಿಂದ ಆಗುತ್ತಿರುವ ಅನಾಹುತಗಳು ಒಂದಲ್ಲ, ಎರಡಲ್ಲ. ಇದೀಗ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು ಭಾರೀ ಸಾವು ನೋವಿನ ಆತಂಕ ಎದುರಾಗಿದೆ.
ಇಂದು ಬೆಳಗ್ಗೆ ನವ ಮುಂಬೈನಲ್ಲಿ ದುರ್ಘಟನೆ ಸಂಭವಿಸಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ, ಎನ್ಡಿಆರ್ಎಫ್ ಪಡೆ ದುರ್ಘಟನಾ ಸ್ಥಳಕ್ಕೆ ಬಂದಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರೋರನ್ನು ರಕ್ಷಣೆ ಮಾಡುತ್ತಿದ್ದಾರೆ. ಮಾಹಿತಿಗಳ ಪ್ರಕಾರ, 24 ಕುಟುಂಬಗಳು ಆ ಬಿಲ್ಡಿಂಗ್ನಲ್ಲಿ ವಾಸವಿದ್ದರು ಎಂದು ಹೇಳಲಾಗಿದೆ. ಇಂದು ಮುಂಜಾನೆ ಐದು ಗಂಟೆ ಸುಮಾರಿಗೆ ಕಟ್ಟಡ ಬಿದ್ದಿದೆ ಎಂದು ನವ ಮುಂಬೈನ ಮುನ್ಸಿಪಾಲ್ ಕಾರ್ಪೊರೇಷನ್ ಕಮೀಷನರ್ ಕೈಲಾಸ್ ಶಿಂದೆ ಮಾಹಿತಿ ನೀಡಿದ್ದಾರೆ. ಈಗಾಗಲೇ ಇಬ್ಬರನ್ನು ರಕ್ಷಣೆ ಮಾಡಿರುವ ಬಗ್ಗೆಯೂ ತಿಳಿಸಿದ್ದಾರೆ.