ರಾಜಸ್ಥಾನದಿಂದ ಬೆಂಗಳೂರಿಗೆ ಬಂದದ್ದು, ನಾಯಿ ಮಾಂಸ ಅಲ್ಲ, ಮೇಕೆಯ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ಗೃಹಸಚಿವ ಡಾ.ಜಿ ಪರಮೇಶ್ವರ್ ಹೇಳಿದರು.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಾಯಿ ಮಾಂಸ ಮಾರಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಲ್ಯಾಬ್ನಲ್ಲಿ ಅದು ಮೇಕೆ ಮಾಂಸ ಎಂದು ವರದಿ ಬಂದಿದೆ. ಅನಾವಶ್ಯಕವಾಗಿ ದುರುದ್ದೇಶದಿಂದ ದೂರು ನೀಡಲಾಗಿದೆ ಎಂದಿದ್ದಾರೆ. ರಾಜಸ್ಥಾನದಿಂದ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ವಾರಕ್ಕೊಮ್ಮೆ ಅಥವಾ 15 ದಿನಕ್ಕೊಮ್ಮೆ ಮಾಂಸ ಮಾರಾಟ ಮಾಡುವುದು ವೃತ್ತಿ. ಅದು ನಾಯಿ ಮಾಂಸ ಅಲ್ಲ ಮೇಕೆ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ತಿಳಿಸಿದರು.
ರಾಜ್ಯದ ಸಂಪತ್ತು ಹಾಳಾಗುತ್ತಿದೆ, ಸಂಪತ್ತು ಲೂಟಿ ಆಗುತ್ತಿದೆ ಅಂತ ಬಿಜೆಪಿಯವರು ಪಾದಯಾತ್ರೆ ಮಾಡುತ್ತಿರುವುದಾಗಿ ಬಿಜೆಪಿಯವರು ಹೇಳಿದ್ದಾರೆ. ಅವರ ಪಾದಯಾತ್ರೆ ಅನವಶ್ಯಕವಾಗಿದೆ. ಸಿಎಂ ಮೇಲೆ ಅನಾವಶ್ಯಕ ಆರೋಪ ಮಾಡಿ ಪಾದಯಾತ್ರೆ ಮಾಡುತ್ತಿದ್ದಾರೆ.ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ ಆಗಿಲ್ಲ. ಕಾನೂನು ಉಲ್ಲಂಘನೆ ಆಗಿಲ್ಲದಿದ್ದರೂ ಆಗಿದೆ ಎಂದು ಬಿಂಬಿಸಲು ಬಿಜೆಪಿಯವರು ಹೊರಟಿದ್ದಾರೆ ಎಂದು ಕಿಡಿ ಕಾರಿದ್ದಾರೆ.