ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ, ಅದು ಮೇಕೆಯ ಮಾಂಸ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜಸ್ಥಾನ ದಿಂದ ಪ್ರತಿವಾರ ಅಥವಾ 15 ದಿನಕ್ಕೊಮ್ಮೆ ಮಾಂಸ ತಂದು ಮಾರಾಟ ಮಾಡುವುದು ಕೆಲವರ ವೃತ್ತಿಯಾಗಿದೆ. ಆದರೆ, ಯಾರೋ ಹೋಗಿ ಅದು ನಾಯಿ ಮಾಂಸ ಅಂತಾ ಹೇಳಿ, ಅನಾವಶ್ಯಕವಾಗಿ ಆರೋಪ ಮಾಡಿ, ಗಲಾಟೆ ಮಾಡಿದ್ದಾರೆ. ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆಯವರು ಮಾಂಸ ವನ್ನು ಪ್ರಯೋಗಾಲಯಕ್ಕೆ ಕಳಿಸಿದ್ದಾರೆ. ಪ್ರಯೋಗಾಲಯದ ವರದಿ ಬಂದಿದ್ದು, ಅದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸವೆಂಬುದಾಗಿ ತಿಳಿದು ಬಂದಿದೆ ಎಂದರು. ಯಾರೇ ಆಗಲಿ ಅನಾವಶ್ಯಕ, ದುರುದ್ದೇಶದಿಂದ ಗಲಾಟೆ ಮಾಡಲು ಮುಂದಾದರೆ ಸುಮ್ಮನೆ ಕೂಡುವುದಕ್ಕೆ ಸಾಧ್ಯವಿಲ್ಲ. ಅದರ ಬಗ್ಗೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಹಿಂದು ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಬಂಧನವನ್ನು ಸಚಿವರು ಸಮರ್ಥಿಸಿಕೊಂಡರು.