ಸಿಎಂ ಸಿದ್ದರಾಮಯ್ಯ ಅವರು ಮಾಡಿದ ಆರೋಪವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕಾಗೋಷ್ಠಿ ನಡೆಸಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರು ಸಚಿವರಾಗಿದ್ದಾಗ ಅವರು ನಿಭಾಯಿಸಿದ ಸಮಾಜ ಕಲ್ಯಾಣ ಇಲಾಖೆಯಲ್ಲೂ ಭ್ರಷ್ಟಚಾರ ನಡೆದಿತ್ತು ಎಂದು ಆರೋಪಿಸಿದ್ದರು. ಈ ಹೇಳಿಕೆಯನ್ನು ವಾಪಾಸ್ ಪಡೆಯಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ಆಗ್ರಹಿಸಿ ಒಂದು ವಾರದ ಗಡುವು ನೀಡಿದ್ದರು. ಸಿಎಂ ಹಾಗೂ ಡಿಸಿಎಂಗಳಿಂದ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಜು 29ರ ಬೆಳಗ್ಗೆಯಿಂದ ವಿಧಾನಸೌಧದ ಆವರಣದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಫೋಟೋ ಇಟ್ಟುಕೊಂಡು ಸಂಸದ ಕೋಟ ಶ್ರೀನಿವಾಸ ಪೂಜಾರಿ ಧರಣಿ ಕೂತಿದ್ದಾರೆ.