ಜಾರ್ಖಂಡ್ನಲ್ಲಿ ಇಂದು ಮುಂಜಾನೆ ಹೌರಾ-ಮುಂಬೈ ಪ್ಯಾಸೆಂಜರ್ ರೈಲು ಹಳಿತಪ್ಪಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. 20 ಮಂದಿಗೆ ಗಾಯಗಳಾಗಿವೆ. ಜಾರ್ಖಂಡ್ನ ಚರಧರ್ಪುರ ವಿಭಾಗದ ಬಳಿ ಮುಂಜಾನೆ 3.43 ರ ಸುಮಾರಿಗೆ ಈ ಘಟನೆ ನಡೆದಿದೆ. ರೈಲಿನ 18 ಬೋಗಿಗಳು ಹಳಿ ತಪ್ಪಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈ ಘಟನೆಯಿಂದ ಗಾಯಗೊಂಡ ಎಲ್ಲ ಪ್ರಯಾಣಿಕರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ. ಎದುರುಗಡೆಯಿಂದ ಬರುತ್ತಿದ್ದ ಗೂಡ್ಸ್ ರೈಲು ಹಳಿತಪ್ಪಿ ಎದುರಿನಿಂದ ಹಾದು ಹೋಗುತ್ತಿದ್ದ ಪ್ಯಾಸೆಂಜರ್ ರೈಲು ಮೇಲೆ ಪರಿಣಾಮ ಬೀರಿದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಚಕ್ರಧರಪುರ ರೈಲ್ವೆ ವಿಭಾಗದ ಅಧಿಕಾರಿಗಳು, ಪರಿಹಾರ ರೈಲು ಮತ್ತು ಹಲವಾರು ಆಂಬ್ಯುಲೆನ್ಸ್ಗಳನ್ನು ಜಿಲ್ಲಾಡಳಿತದಿಂದ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಚಕ್ರಧರಪುರ ರೈಲ್ವೆ ವಿಭಾಗದ ಹಿರಿಯ ಡಿಸಿಎಂ ಆದಿತ್ಯ ಕುಮಾರ್ ಚೌಧರಿ ತಿಳಿಸಿದ್ದಾರೆ.