ಬೆಳಗಾವಿಯಲ್ಲಿ ಭಯಾನಕ ಭವಿಷ್ಯ ನುಡಿದ ಕೋಡಿಮಠದ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿ. ಕೇರಳದಲ್ಲಿ ಭೂಕುಸಿತ ಪ್ರಕರಣ ವಿಚಾರಕ್ಕೆ ಮಾತಾಡಿದ ಸ್ವಾಮಿಗಳು, ಕಳೆದ ಇಪ್ಪತ್ತು ದಿನಗಳ ಹಿಂದೆ ನಾನು ಧಾರವಾಡದಲ್ಲಿ ಈ ತರಾ ಆಗುತ್ತೆ ಅಂತಾ ಹೇಳಿದ್ದೆ, ಮಳೆ ಆಗುತ್ತೆ, ಗುಡ್ಡ ಉರುಳುತ್ತೆ, ಜನರು ಸಾಯುತ್ತಾರೆ, ರೋಗರುಜ್ಜಿನುಗಳು ಹೆಚ್ಚಾಗುತ್ತವೆ ಅಂತಾ ಹೇಳಿದ್ದೆ. ಬರೀ ಭಾರತಕ್ಕೆ ಅಷ್ಟೇ ಹೇಳಿರಲಿಲ್ಲ ಜಾಗತಿಕ ಮಟ್ಟದಲ್ಲಿ ಕೆಲವು ರಾಜ್ಯಗಳು ಮುಳುಗುತ್ತವೆ ಅಂತಾ ಹೇಳಿದ್ದೆ. ನನ್ನ ಪ್ರಕಾರ ಅಮಾವಾಸ್ಯೆವರೆಗೆ ಮಳೆ ಇರುತ್ತೆ ಬಳಿಕ ಬೇರೆ ಭಾಗಕ್ಕೆ ಹೋಗುತ್ತೆ ಎಂದರು.
ಇದು ಕ್ರೋಧಿನಾಮ ಸಂವತ್ಸರ, ಕ್ರೋಧ ಅಂದರೆ ಸಿಟ್ಟು, ಇದರಲ್ಲಿ ಒಳ್ಳೆಯದು ಕೆಟ್ಟದ್ದು ಇದೆ, ಆ ಪೈಕಿ ಕೆಟ್ಟದ್ದೆ ಜಾಸ್ತಿ ಇರುತ್ತೆ. ಇದು ಪ್ರಾಕೃತಿಕ ದೋಷ ಮುಂದುವರೆಯುತ್ತೆ ಎಂದರು ಕೋಡಿಮಠ ಸ್ವಾಮೀಜಿಗಳು. ಅಮವಾಸ್ಯೆಯವರೆಗೆ ಒಂದು ಭಾಗಕ್ಕೆ ನಿಲ್ಲುತ್ತೆ. ನಂತರ ಮತ್ತೊಂದು ಭಾಗಕ್ಕೆ ಹೋಗುತ್ತೆ. ಮುಂದೆ ಅನಿಷ್ಟ ಜಾಸ್ತಿ ಇದೆ, ಕತ್ತಲು ಬೆಳಕು ಎರಡು ಇರುತ್ತೆ ಅದರಲ್ಲಿ ಕತ್ತಲು ಜಾಸ್ತಿ ಇರುತ್ತೆ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಇನ್ನೂ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ವಿಚಾರಕ್ಕೆ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ರಾಜ್ಯ ರಾಜಕೀಯದಲ್ಲಿ ಬದಲಾವಣೆ ವಿಚಾರಕ್ಕೆ ಒಬ್ಬ “ಸನ್ನಾಸಿ ಬೇಡನ” ಕಥೆ ಹೇಳಿದ್ದಾರೆ. ಒಬ್ಬ ಸನ್ಯಾಸಿ ತಪ್ಪಿಸಿಗೆ ಕುಳಿತಿದ್ದನಂತೆ, ಆಗ ಒಬ್ಬ ಬೇಡ ಬೇಟೆಗೆ ಜಿಂಕೆಯನ್ನ ಓಡಿಸಿಕೊಂಡು ಬಂದನಂತೆ. ಸ್ವಾಮೀಜಿ ಮುಂದೆ ಜಿಂಕೆ ಹೋಯಿತಂತೆ, ಆಗ ಸ್ವಾಮೀಜಿಯನ್ನ ಜಿಂಕೆ ಹೋಯಿತಾ ಅಂತ ಬೇಡ ಕೇಳಿದ್ನಂತೆ, ಆಗ ಸನ್ಯಾಸಿ ಹೋಯಿತು ಅಂತಾ ಹೇಳಿದ್ರೆ ಕೊಂದ ಪಾಪ ತಟ್ಟುತ್ತೆ, ಇಲ್ಲ ಅಂತಾ ಹೇಳಿದರೆ ಸುಳ್ಳು ಹೇಳಿದ ಪಾಪವೂ ತಟ್ಟುತ್ತೆ. ಹೀಗಿದ್ದಾಗ ಯಾವುದು ನೋಡ್ತು ಅದಕ್ಕೆ ಮಾತು ಬರಲ್ಲ, ಯಾವ್ದು ಮಾತನಾಡ್ತು ಅದು ನೋಡಿಲ್ಲ ಎಂದರಂತೆ ಸನ್ಯಾಸಿ. ಅಂದರೆ ಕಣ್ಣು ನೋಡ್ತು ಕಣ್ಣಿಗೆ ಮಾತು ಬರಲ್ಲ, ನಾಲಿಗೆ ಮಾತಾಡ್ತು ಆದರೆ ಅದು ನೋಡಲಿಲ್ಲ ಎಂದು ಮಾರ್ಮಿಕವಾಗಿ ಕೋಡಿಮಠ ಸ್ವಾಮೀಜಿ ಹೇಳಿದ್ದಾರೆ.
ಕಳೆದ ಇಪ್ಪತ್ತು ದಿನಗಳ ಹಿಂದೆ ಲೋಕಸಭಾ ಚುನಾವಣೆ ಕುರಿತಾಗಿ ಮಹಾಭಾರತದ ಸನ್ನಿವೇಶವನ್ನೂ ಧಾರವಾಡದಲ್ಲಿ ಹೇಳಿದ್ದೆ. ಅದರಲ್ಲಿ ಅಭಿಮನ್ಯುನನ್ನು ಎಲ್ಲರೂ ಕೂಡಿ ಮೋಸದಲ್ಲಿ ಕೊಲ್ತಾರೆ ಅಂತಾ ಹೇಳಿದ್ದೆ. ಮಹಾಭಾರತದಲ್ಲಿ ಕೃಷ್ಣ ಇದ್ದ ಅನ್ನೋ ಕಾರಣಕ್ಕೆ ಭೀಮ ಗೆದ್ದ ದುರ್ಯೋಧನ ಸೋತ. ಆದರೆ ಇಲ್ಲಿ ಕೃಷ್ಣ ಇಲ್ಲ, ದುರ್ಯೋಧನ ಗೆಲ್ತಾನೆ ಭೀಮ ಸೋಲ್ತಾನೆ ಎಂದು ಸ್ವಾಮೀಜಿ ಹೇಳಿದರು.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಏನು ತೊಂದರೆ ಕಾಣ್ತಿಲ್ಲ ಎಂದರು. ಮುಂದೆ ತೊಂದರೆ ಆಗುತ್ತಾ ಎಂಬ ವಿಚಾರಕ್ಕೆ “ಬೇಡ ಸನ್ನಾಸಿ” ಕಥೆ ಹೇಳಿದ ಸ್ವಾಮೀಜಿ ಏನಾದರೂ ಹೇಳಿದ್ರೆ ಮುಂದೆ ಓಡಾಡದ ಹಾಗೆ ಮಾಡಿಬಿಡ್ತೀರ ಎಂದು ಹೇಳಿದ್ದಾರೆ. ಜನರು ಎಲ್ಲವನ್ನೂ ಮನಶಾಂತಿಯಿಂದ ತೆಗೆದುಕೊಳ್ಳುತ್ತಿಲ್ಲ, ದ್ವೇಷ ಭಾಷೆಯಿಂದ ತೆಗೆದುಕೊಳ್ಳುತ್ತಿದ್ದಾರೆ. ಆತ್ಮಸಾಕ್ಷಿಯಾಗಿ ಜನರು ಮತ ನೀಡಿತ್ತಿಲ್ಲ, ಎಲ್ಲಿಯವರೆಗೆ ಮತ ಸೇಲ್ ಮಾಡಿಕೊಳ್ಳುತ್ತಾರೆ, ಅಲ್ಲಿಯವರೆಗೆ ಲಾಭ ನಷ್ಟ ಇರುತ್ತೆ. ಹಿಂದಿನ ಕಾಲದಲ್ಲಿ ಧರ್ಮದ ಅನುಮತಿ ಪಡೆದು ರಾಜಕಾರಣ ಮಾಡುತ್ತಿದ್ರು, ಈಗ ಧರ್ಮವೂ ಇಲ್ಲ ಗುರಿಯೂ ಇಲ್ಲ, ದುಡ್ಡು ಮಾಡೋದಷ್ಟೇ ಗುರಿ. ಹಾಗಾಗಿ ಬಹುಬೇಗ ಇವರಿಗೆ ಅಪಘಾತಗಳು ಆಗ್ತಿವೆ. ಮನುಷ್ಯ ಯಾವುದೇ ಅಪೇಕ್ಷೆ ಇಲ್ಲದೇ ಮತ ಹಾಕ್ತಾನೆ, ಅಲ್ಲಿಯವರೆಗೆ ರಾಮರಾಜ್ಯ ಸಿಗಲ್ಲ ಎಂದರು ಸ್ವಾಮೀಜಿ.