ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲು ಬಿ ವೈ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಯತ್ನಾಳ್, ಡಿಕೆಶಿ ಆದೇಶದಂತೆ ಸಿದ್ದರಾಮಯ್ಯ ರನ್ನು ಸಿಎಂ ಸ್ಥಾನದಿಂದ ಇಳಿಸಲು ವಿಜಯೇಂದ್ರ ಪಾದಯಾತ್ರೆ ಮಾಡ್ತಿದ್ದಾರೆ. ಈ ಪಾದಯಾತ್ರೆಯಲ್ಲಿ ಹೊಂದಾಣಿಕೆ ರಾಜಕಾರಣ ಇದೆ. ಡಿ.ಕೆ. ಶಿವಕುಮಾರ್ ಅವರ ಉಪಕಾರ ತೀರಿಸಲಿಕ್ಕೆ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಮುಡಾ ವಿಚಾರವಾಗಿ ಬಿವೈ ವಿಜಯೇಂದ್ರ ನಡೆಸುತ್ತಿರುವ ಹೋರಾಟದಲ್ಲಿ ಡಿಕೆ ಶಿವಕುಮಾರ್ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ವಾಲ್ಮೀಕಿ ನಿಗಮದ ವಿಚಾರದಲ್ಲಿ ನಾನು ಪ್ರತ್ಯೇಕ ಪ್ರತಿಭಟನೆ ನಡೆಸುತ್ತೇನೆ. ನಾವು ಮತ್ತು ರಮೇಶ್ ಜಾರಕಿಹೊಳಿ ಕೇಂದ್ರದಿಂದ ಒಪ್ಪಿಗೆ ಪಡೆದು ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ ಎಲ್ಲಿಂದ ಪ್ರತಿಭಟನೆ ಮಾಡಬೇಕೆಂದು ನಿರ್ಣಯವಾಗಿಲ್ಲ ಎಂದರು.