ಕೋಲ್ಕತ್ತಾದಲ್ಲಿ ಭಾರೀ ಮಳೆಗೆ ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೀರು ನಿಂತು ಪ್ರವಾಹದಂತಾಗಿದೆ. ಸಂಪೂರ್ಣ ವಿಮಾನ ನಿಲ್ದಾಣ ನೀರಿನಿಂದ ತುಂಬಿದೆ. ಬಂಗಾಳದ ರಾಜಧಾನಿ ಮತ್ತು ಅದರ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಿದ್ದು, ಇದರ ಪರಿಣಾಮ ವಿಮಾನ ನಿಲ್ದಾಣಕ್ಕೂ ಬಂದಿದೆ. ರನ್ವೇ ಮತ್ತು ಟ್ಯಾಕ್ಸಿವೇಗಳಲ್ಲಿ ನೀರು ನಿಂತಿರವುದನ್ನು ಕಾಣಬಹುದು. ವಿಮಾನ ನೀರಿನ ಮೇಲೆ ನಿಂತಿದೆ.
ಹೌರಾ, ಸಾಲ್ಟ್ ಲೇಕ್ ಮತ್ತು ಬ್ಯಾರಕ್ಪುರ ಸೇರಿದಂತೆ ಕೋಲ್ಕತ್ತಾ ಮತ್ತು ಅದರ ನೆರೆಯ ಪ್ರದೇಶಗಳು ನಿರಂತರ ಮಳೆಯಿಂದ ಮುಳುಗಿ ಹೋಗಿದೆ. ಹವಾಮಾನ ಅಧಿಕಾರಿಗಳ ಪ್ರಕಾರ ಪ್ರವಾಹ ಉಂಟಾಗುವ ಸಾಧ್ಯತೆ ಇದೆ. ಇನ್ನು ಈ ಪ್ರವಾಹದ ಪರಿಣಾಮ ಬಿಹಾರ ಹಾಗೂ ಉತ್ತರಪ್ರದೇಶಕ್ಕೂ ತಲುಪಲಿದೆ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳದ ದಕ್ಷಿಣ ಜಿಲ್ಲೆಗಳಲ್ಲಿ ಮಾನ್ಸೂನ್ ಕಾರಣದಿಂದ ಹೆಚ್ಚಿನ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಿದ್ದಾರೆ.