ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಹೈಕೋರ್ಟಿಗೆ ಸಲ್ಲಿಸಿದ್ದ ಜಾಮೀನು ಅರ್ಜಿನ್ನು ಹೈಕೋರ್ಟ್ ವಜಾಗೊಳಿಸಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿ ಕಸ್ಟಡಿಗೆ ನೀಡಿರುವುದನ್ನು ಪ್ರಶ್ನಿಸಿ, ನನ್ನ ಬಂಧನ ಅಕ್ರಮ, ಈ ಬಗ್ಗೆ ಹೈಕೋರ್ಟ್ ನನಗೆ ನ್ಯಾಯ ನೀಡಬೇಕು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದರು. ಇದೀಗ ಈ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.