ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ದೊಡ್ಡಬಳ್ಳಾಪುರದ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ದೊಡ್ಡಬಳ್ಳಾಪುರದ ಟಿಬಿ ಕ್ರಾಸ್ ಬಳಿ ಇರುವ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಹಂ ಸಿಎಂ ಸಿದ್ದರಾಮಯ್ಯ ವಿರುದ್ಧ ನೀಡಿದ್ದ ದೂರಿನನ್ವಯ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಆದೇಶ ಹೊರಡಿಸಬಾರದು. ಬಿಜೆಪಿಯ ಏಜೆಂಟ್ ಆಗಿ ಅಬ್ರಾಹಂ ವರ್ತಿಸುತ್ತಿದ್ದಾರೆ.
ಸಿದ್ದರಾಮಯ್ಯ ವರ್ಚಸ್ಸನ್ನು ತಾಳಲಾರದೇ ಬಿಜೆಪಿಗರು ಕುತಂತ್ರ ಮಾಡ್ತಿದ್ದಾರೆ. ಬಿಜೆಪಿಗರು ಸಿದ್ದರಾಮಯ್ಯ ಅವರಿಗೆ ಕಳಂಕ ತರುವ ಪ್ರಯತ್ನ ಮಾಡ್ತಿದ್ದಾರೆ. ಮುಂದಿನ ದಿನಗಳಲ್ಲಿ ಏನಾದರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದರೆ ರಾಜ್ಯದಲ್ಲಿ ರಕ್ತಪಾತವಾಗುತ್ತೆ, ಕೂಡಲೇ ಸಿದ್ದರಾಮಯ್ಯಗೆ ರಾಜ್ಯಪಾಲರು ಕೊಟ್ಟಿರುವ ಶೋಕಾಸ್ ನೋಟಿಸ್ ಅನ್ನು ಹಿಂಪಡೆಯಬೇಕು ಎಂದು ದೊಡ್ಡಬಳ್ಳಾಪುರದ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಹಿಂದುಳಿದ ಜಾತಿಗಳ ಒಕ್ಕೂಟ ರಾಜ್ಯಪಾಲರಿಗೆ ಒತ್ತಾಯಿಸಿದ್ದಾರೆ.