ಪ್ಯಾರಿಸ್ ಒಲಿಂಪಿಕ್ಸ್ ರ ಕುಸ್ತಿ ಪಂದ್ಯದಲ್ಲಿ ಅನರ್ಹವಾಗಿರುವ ವಿನೇಶ್ ಫೋಗಟ್ ಬಗ್ಗೆ ಕೈಸರ್ಗಂಜ್ನ ಸಂಸದ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಪುತ್ರ ಕರಣ್ ಭೂಷಣ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಇದು ದೇಶಕ್ಕೆ ದೊಡ್ಡ ನಷ್ಟ ಎಂದು ಹೇಳಿದ್ದಾರೆ. ಈ ಬಗ್ಗೆ ಫೆಡರೇಶನ್ ಪರಿಗಣನೆಗೆ ತೆಗೆದುಕೊಂಡು ಏನು ಮಾಡಬಹುದು ಎಂಬ ಬಗ್ಗೆ ಚಿಂತನೆ ನಡೆಸುತ್ತದೆ ಎಂದು ಹೇಳಿದರು.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಮಹಿಳಾ ಕುಸ್ತಿ ಪಂದ್ಯದ 50 ಕೆಜಿ ವಿಭಾಗದಲ್ಲಿ ಫೈನಲ್ಗೆ ತಲುಪಿದ್ದ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸುವು ಭಾರತಕ್ಕೆ ಭಾರಿ ಹಿನ್ನಡೆಯಾಗಿದೆ. ಈ ಬಗ್ಗೆ ಪ್ರಧಾನಿ ಮೋದಿ ಕೂಡ ಮಾತನಾಡಿದ್ದಾರೆ. ಇದು ಆಘಾತಕಾರಿಯಾಗಿದೆ. ನೀವು ನಮ್ಮ ದೇಶದ ಹೆಮ್ಮೆ ಎಂದು ವಿನೇಶ್ ಫೋಗಟ್ ಪರ ನಿಂತಿದ್ದಾರೆ. ಇನ್ನು ಮೋದಿ ಅವರು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ ಪಿಟಿ ಉಷಾ ಅವರ ಜತೆಗೂ ಮಾತನಾಡಿದ್ದಾರೆ. ಪಿಟಿ ಉಷಾ ಕೂಡ ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಮಾಹಿತಿಯನ್ನು ನೀಡಿದ್ದಾರೆ.
ವಿನೇಶ್ ಫೋಗಟ್ ಮಾಜಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು. ಈ ಪ್ರಕರಣದಿಂದ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಭಾರೀ ಮುಜುಗರವನ್ನು ತಂದಿತ್ತು. ಆ ನಂತರ ಅವರನ್ನು ಪಕ್ಷದಿಂದ ದೂರು ಇಟ್ಟು, ಅವರ ಮಗನಿಗೆ ಟಿಕೆಟ್ ನೀಡಲಾಗಿತ್ತು ಇದೀಗ ಅವರು ಸಂಸದರಾಗಿದ್ದಾರೆ.