ಬೆಂಗಳೂರಿನಲ್ಲಿ ಝೀಕಾ ವೈರಸ್ ಕಾಣಿಸಿಕೊಂಡಿದ್ದು, ನಾಗರಿಕರಲ್ಲಿ ಭೀತಿ ಹುಟ್ಟಿಸಿದೆ. ರಾಜ್ಯದಲ್ಲಿ 7 ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿತ್ತು. ರಾಜ್ಯ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ವೈರಸ್ ತಗುಲದಂತೆ ಮುನ್ನೆಚ್ಚರಿಕೆ ವಹಿಸಿದೆ. ಆದರೆ ಬಿಬಿಎಂಪಿ ವ್ಯಾಪ್ತಿಯ ಬೊಮ್ಮಸಂದ್ರ ವಾರ್ಡ್ ನಲ್ಲಿ ಮೊದಲ ಕೇಸ್ ದೃಢವಾಗಿದೆ.
ಆನೇಕಲ್ ಗೆ ಅಂಟಿಕೊಂಡೇ ಇರುವ ಬೊಮ್ಮಸಂದ್ರ ವಾರ್ಡ್ ನಲ್ಲಿ ಝೀಕಾ ವೈರಸ್ ಪತ್ತೆಯಾಗಿದ್ದು, ಈ ಮೂಲಕ ಬೆಂಗಳೂರು ನಗರ ಜಿಲ್ಲೆ ಹಾಗೂ ಪಾಲಿಕೆ ಸೇರಿದ ವ್ಯಾಪ್ತಿಯಲ್ಲಿ ಒಟ್ಟು 6 ಕೇಸ್ ದಾಖಲಾಗಿದೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಲು ಮುಂದಾಗಿದ್ದಾರೆ. ನಗರ ಜಿಲ್ಲಾಡಳಿತ ಹಾಗೂ ಬಿಬಿಎಂಪಿ ಜಂಟಿಯಾಗಿ ಕ್ರಮ ಕೈಗೊಂಡಿದ್ದು, ಡೆಂಘೀ ಮಾದರಿಯಲ್ಲೇ ಕಟ್ಟೆಚ್ಚರ ವಹಿಸಲು ಬಿಬಿಎಂಪಿ ಸೂಚಿಸಿದೆ. ಜೊತೆಗೆ ರಾಜ್ಯ ಆರೋಗ್ಯ ಇಲಾಖೆ ರಚಿಸಿದ ತಜ್ಞರ ಸಮಿತಿಯಿಂದಲೂ ಪಾಲಿಕೆ ಸಲಹೆ ಪಡೆಯಲಿದೆ.