ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳಿಂದ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಅಧಿಕಾರಿಗಳಾದ ಪದ್ಮನಾಭ, ಪರುಶುರಾಮ್ ಅವರು ಒತ್ತಡದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಿ ಸಿಐಡಿ ಅಧಿಕಾರಿಗಳ ತಂಡ 300 ಪುಟಗಳ ಚಾರ್ಜ್ಶೀಟ್ ಅನ್ನು ಶಿವಮೊಗ್ಗ ಕೋರ್ಟ್ಗೆ ಸಲ್ಲಿಸಿದ್ದಾರೆ.
ಘಟನೆ ಸಂಬಂಧ ಶಿವಮೊಗ್ಗದ ವಿನೋಭಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಚಂದ್ರಶೇಖರ್ ಪತ್ನಿ ನೀಡಿದ್ದ ದೂರು ಆಧರಿಸಿ ಸಿಐಡಿ ತನಿಖೆ ನಡೆಸಿತ್ತು. ಡೆತ್ನೋಟ್ ಆಧರಿಸಿ ತನಿಖೆ ಮಾಡಿರುವ ಸಿಐಡಿ ಅಧಿಕಾರಿಗಳ ಟೀಂ ಇದೀಗ ಕೇವಲ ಪದ್ಮನಾಭ, ಪರುಶುರಾಮ್ ಆರೋಪಿಗಳಾಗಿ ಮಾಡಿ ಚಾರ್ಜ್ಶೀಟ್ ಸಲ್ಲಿಸಿದೆ. ಈ ಹಿಂದೆ ವಿಶೇಷ ತನಿಖಾ ತಂಡ ಸಲ್ಲಿಸಿದ್ದ ಪ್ರಾಥಮಿಕ ಆರೋಪ ಪಟ್ಟಿಯಲ್ಲೂ ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ, ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಅವರ ಹೆಸರು ಉಲ್ಲೇಖಿಸಿರಲಿಲ್ಲ.