ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅರ್ಲಟ್ ಘೋಷಣೆ ಮಾಡಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.