ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿರುವ ನಾಸಾದ ಗಗನಯಾತ್ರಿ ಸುನಿತ್ ವಿಲಿಯಮ್ಸ್ ಮುಂದಿನ ವರ್ಷ ಭೂಮಿಗೆ ಮರಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಾಸಾದ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಫ್ಲೋರಿಡಾದ ಕೇಪ್ ಕ್ಯಾನವೆರಲ್ ಬಾಹ್ಯಾಕಾಶ ನಿಲ್ದಾಣದಿಂದ ಸ್ಪೇಸ್ ಲಾಂಚ್ ಕಾಂಪ್ಲೆಕ್ಸ್41ನಿಂದ ಜೂನ್ 5ರಂದು ಬಾಹ್ಯಾಕಾಶಕ್ಕೆ ಹಾರಿದ್ದರು.
ಜೂನ್ 6 ರಂದು ಇಬ್ಬರೂ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ತಲುಪಿದರು. ಈ ಮಿಷನ್ ಕೇವಲ 8 ದಿನಗಳಾಗಿತ್ತು ಆದರೂ ಇಂದಿಗೂ ಅವರು ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿದ್ದಾರೆ. ನಾಸಾ ಮತ್ತು ಬೋಯಿಂಗ್ ತಂಡಗಳು ತಮ್ಮ ಸುರಕ್ಷಿತ ವಾಪಸಾತಿಗಾಗಿ ನಿರಂತರವಾಗಿ ಪ್ರಯತ್ನಿಸುತ್ತಿವೆ, ಆದರೆ ಇಲ್ಲಿಯವರೆಗೆ ಅವು ವಿಫಲವಾಗಿವೆ.
ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್ ಸಂಸ್ಥೆಯ ಸ್ಟಾರ್ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನವನ್ನು ಜೂನ್ 5ರಂದು ಆರಂಭಿಸಿದ್ದರು. ಭಾರತದ ಮೂಲದ ಡಾ. ದೀಪಕ್ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಮಹತ್ವದ ಅಧ್ಯಯನಕ್ಕಾಗಿ ಮಂಗಳವಾರ ಮೂರನೇ ಬಾರಿ ಬಾಹ್ಯಾಕಾಶಕ್ಕೆ ಹಾರಲಿದ್ದ ಸುನೀತಾ ವಿಲಿಯಮ್ಸ್ ಎಲ್ಲ ತಯಾರಿ ಮಾಡಿಕೊಂಡಿದ್ದರು.