ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನವು ಇಸ್ಲಾಮಾಬಾದ್ನಲ್ಲಿ ನಡೆಯಲಿರುವ ಶಾಂಘೈ ಕೋಆಪರೇಶನ್ ಆರ್ಗನೈಸೇಶನ್ ಸಭೆಗೆ ಅಧಿಕೃತವಾಗಿ ಆಹ್ವಾನಿಸಿದೆ. ಈ ಸಭೆ ಆಕ್ಟೋಬರ್ನಲ್ಲಿ ನಡೆಯಲಿದೆ ಎಂದು ವರದಿ ಹೇಳಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಾಪ್ತಾಹಿಕ ಸುದ್ದಿಗೋಷ್ಠಿಯಲ್ಲಿ ವಕ್ತಾರ ಮುಮ್ತಾಜ್ ಜಹ್ರಾ ಬಲೋಚ್ ಅವರು, ಮುಂಬರುವ ಇಸ್ಲಾಮಾಬಾದ್ನ ಸರ್ಕಾರದ ಮುಖ್ಯಸ್ಥರ ಮಂಡಳಿ ಸಭೆಗೆ ಭಾರತೀಯ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಶಾಂಘೈ ಸಹಕಾರ ಸಂಸ್ಥೆ ಸದಸ್ಯ ರಾಷ್ಟ್ರಗಳ ಎಲ್ಲಾ ಮುಖ್ಯಸ್ಥರನ್ನು ಪಾಕಿಸ್ತಾನ ಆಹ್ವಾನಿಸಿದೆ.