ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಪಣತೊಟ್ಟಿದ್ದು, ಈ ಹಿನ್ನಲೆ ಡೆಂಗ್ಯೂ ವನ್ನು ಸಾಂಕ್ರಾಮಿಕ ಖಾಯಿಲೆ ಎಂದು ಸರ್ಕಾರ ಘೋಷಿಸಿದೆ. ಇನ್ನು ಮುಂದೆ ನೈರ್ಮಲ್ಯ(ಸ್ವಚ್ಚತೆ) ಕಾಪಾಡದವರಿಗೆ ದಂಡ ಬೀಳಲಿದೆ. ಹೌದು, ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020ಕ್ಕೆ ತಿದ್ದುಪಡಿ ಮಾಡಿ ಆಗಸ್ಟ್ 31ರ ಕರ್ನಾಟಕ ಗೆಜೆಟ್ನಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಮನೆ, ಖಾಲಿ ಜಾಗ, ಕಟ್ಟಡದ ಬಳಿ ಸ್ವಚ್ಛತೆ ಕಾಪಾಡಬೇಕು. ಸೊಳ್ಳೆ ಸಂತಾನೋತ್ಪತ್ತಿ ಹರಡಲು ಅವಕಾಶ ನೀಡದಂತೆ ಕ್ರಮವಹಿಸಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಮಾಲೀಕರಿಗೆ ದಂಡ ವಿಧಿಸಬಹುದಾಗಿದೆ.
ನಿಯಮಗಳು
- ಸೊಳ್ಳೆಗಳ ಸಂತಾನೋತ್ಪತ್ತಿ ಹರಡಲು ಅವಕಾಶ ನೀಡದಂತೆ ಕ್ರಮ ಕೈಗೊಳ್ಳಬೇಕು.
- ಆಯಾ ಜಾಗದ ಮಾಲೀಕರು ಸೊಳ್ಳೆ ಬಾರದಂತೆ ಕ್ರಮ ವಹಿಸಬೇಕು.
- ನಿಯಮವನ್ನು ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುವುದು.
- ನಿವೇಶನ ಅಥವಾ ಖಾಲಿ ಜಾಗದಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಆ ರೀತಿ ಕಂಡು ಬಂದರೆ ನೋಟೀಸ್ ನೀಡಬೇಕು.
- 24 ಗಂಟೆಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚನೆ.
- ಸ್ವತ್ತಿನ ಮಾಲೀಕರು ನಿಗಾ ವಹಿಸಿದೆ ಇದ್ದರೆ, ಸಂಬಂಧ ಪಟ್ಟ ಅಧಿಕಾರಿ ಸೊಳ್ಳೆ ಉತ್ಪತ್ತಿಯಾಗದಂತೆ ಕ್ರಮ ವಹಿಸಬೇಕು.
- ರಾಸಾಯನಿಕವನ್ನು ಸಿಂಪಡಿಸಬೇಕು. ಇದಕ್ಕೆ ಖರ್ಚಾದ ವೆಚ್ಚವನ್ನು ಸಂಬಂಧ ಪಟ್ಟವರು ನೀಡುವಂತೆ ಕ್ರಮ ವಹಿಸಬೇಕು.
- ಬಿಬಿಎಂಪಿ ಹಾಗೂ ಮಂಗಳೂರಿನಲ್ಲಿ ತೆರೆದ ಸ್ಥಳದಲಿ ನಿಂತ ನೀರನ್ನ ತೆರವುಗೊಳಿಲು ಆಯಾ ಮಾಲೀಕರೇ ಹೊಣೆ ಸೊಳ್ಳೆ ಉತ್ಪತ್ತಿಯಾಗುವ ಸ್ಥಳವನ್ನ ಅಧಿಕಾರಿಗಳು ಪರಿಶೀಲನೆ ನಡೆಸಬೇಕು.