ನ್ಯಾ. ಹೇಮಾ ಸಮಿತಿ ವರದಿ ಬಿಡುಗಡೆಯ ನಂತರ ಮಲಯಾಳ ಚಿತ್ರರಂಗದಲ್ಲಿ ಕಲಾವಿದೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆ ಕರ್ನಾಟಕದಲ್ಲಿಯೂ ಅಂತಹದ್ದೆ ಸಮಿತಿ ರಚಿಸಬೇಕು ಎಂದು ಕನ್ನಡ ಚಿತ್ರರಂಗದ ಕಲಾವಿದರು ಒತ್ತಾಯಿಸಿದ್ದಾರೆ.
ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಸೇರಿದಂತೆ ಸಮಸ್ಯೆಗಳನ್ನು ಅಧ್ಯಯನ ಮಾಡಿ ವರದಿ ಮಾಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನನು ರಚಿಸುವಂತೆ ಫೀಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದೆ.
ಲಿಂಗ ನ್ಯಾಯವನ್ನು ಪ್ರತಿಪಾದಿಸುವ ಕನ್ನಡ ಚಲನಚಿತ್ರೋದ್ಯಮದ ಮತ್ತು ವಿವಿಧ ಕ್ಷೇತ್ರಗಳ 153 ವ್ಯಕ್ತಿಗಳು ಈ ಅರ್ಜಿಗೆ ಸಹಿ ಹಾಕಿದ್ದಾರೆ. ಕನ್ನಡ ಚಿತ್ರರಂಗದ ಕಲಾವಿದರು, ನಿರ್ದೇಶಕರು ಸೇರಿದಂತೆ ಹಲವು ಬರಹಗಾರರು, ನಿರ್ಮಾಪಕರು ಸಮಿತಿ ರಚನೆಗೆ ಆಗ್ರಹಿಸಿದ್ದಾರೆ.